ರಾಯಚೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ಘಟನೆ ನಡೆದಿದೆ. ಮೊಹಮ್ಮದ್ ಅಲಿ(24), ನೂರ್ ಮೊಹಮ್ಮದ್(19) ಮತ್ತಯ ಫಯಾಜ್(26) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮೂವರೂ ರಾಯಚೂರುನಗರದ ಸುಖಾಣಿ ಕಾಲೋನಿಯ ನಿವಾಸಿಗಳು ಎಂಬುದು ತಿಳಿದುಬಂದಿದೆ. ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ತೆರಳುತ್ತಿದ್ದ ಬೈಕ್ಗೆ ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಟ್ರಕ್ ಚಾಲಕ ಎಸ್ಕೇಪ್ ಆಗಿದ್ದಾನೆ. ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ತೆರಳುತ್ತಿದ್ದ ಬೈಕ್ಗೆ ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

