Breaking News

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಉಂಡು ಹಾರಿಸಿದ ಪೋಲಿಸರು

ಬೆಂಗಳೂರು : ನಗರವನ್ನು ಬೆಚ್ಚಿಬೀಳಿಸಿದ್ದ ರೌಡಿಶೀಟರ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ರೌಡಿಶೀಟರ್ ಆಗಿದ್ದ ಪವನ್‌ ನನ್ನು ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಅಮರಜ್ಯೋತಿ ನಗರದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ರಂಜಿತ್ ಬಾಗಲೂರಿನ ನಿರ್ಜನ ಪ್ರದೇಶದಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಬಂಧಿಸಲು ಮುಂದಾದ ವೇಳೆ ಆರೋಪಿ ಲಾಂಗ್‌ನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದನೆಂದು ತಿಳಿದುಬಂದಿದ್ದು, ಈ ವೇಳೆ ಆತ್ಮರಕ್ಷಣಾರ್ಥವಾಗಿ ಪೊಲೀಸರು ಗುಂಡು ಹಾರಿಸಿದ್ದಾ ಎನ್ನಲಾಗಿದೆ. ರಂಜಿತ್ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದಾನೆ. ಬಳಿಕ ಅವನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮತ್ತಷ್ಟು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *