ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬರ‍್ಯ ಗ್ರಾಮದ ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋವುಗಳನ್ನು ಕೊಂದು ಮಾಂಸ ಮಾಡುತ್ತಿರುವುದನ್ನು ಪತ್ತೆ ಮಾಡಿರುವ ಉಪ್ಪಿನಂಗಡಿ ಪೊಲೀಸರು, ಮನೆಯನ್ನು ಜಪ್ತಿ ಮಾಡಿ ದಂಪತಿ ಸಹಿತ ೩ ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ. 26ರಂದು ರಾತ್ರಿ ಹೊಸವಕ್ಲು ನಿವಾಸಿ ಅಬ್ದುಲ್ ರಹಿಮಾನ್ ಮನೆ ಆವರಣದಲ್ಲಿ ಗೋ ಹತ್ಯೆ ಮಾಡಿ ಮಾಂಸವನ್ನು ರಿಕ್ಷಾವೊಂದಕ್ಕೆ ತುಂಬಿಸುತ್ತಿದ್ದಾಗ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸ್ ಇನ್‌ಸ್ಪೆಕ್ಟರ್ ಸುತೇಶ್ ಮತ್ತು ಸಿಬಂದಿ ರಿಕ್ಷಾ, ಸುಮಾರು ೫೬ ಕೆ.ಜಿ. ಮಾಂಸ, ತೂಕದ ಯಂತ್ರ, ಮೊಬೈಲ್ ಸಹಿತ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಅಬ್ದುಲ್ ರಹಿಮಾನ್, ಆತನ ಪತ್ನಿ ರಹಿಮತ್ ಹಾಗೂ ಇನ್ನೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

