Breaking News

ಏಕಾಏಕಿ ಫ್ರಿಜ್ ಬ್ಲಾಸ್ಟ್!-‌ ಇಡೀ ಮನೆ ಸುಟ್ಟು ಭಸ್ಮ

ರಾಯಚೂರು: ಮನೆಯಲ್ಲಿದ್ದ ಫ್ರಿಜ್‌ ಒಂದು ಏಕಾಏಕಿ ಸ್ಫೋಟಗೊಂಡಿದ್ದು ಇಡೀ ಮನೆ ಹೊತ್ತಿ ಉರಿದ ಶಾಕಿಂಗ್‌ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದಲ್ಲಿ ರಾಜನಾಯ್ಕ್ ಎಂಬುವರ ಮನೆಯಲ್ಲಿ ಫ್ರಿಜ್ ಸ್ಪೋಟಗೊಂಡು ಮನೆ ಹೊತ್ತಿ ಉರಿದಿದೆ. ಈ ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಜನಾಯ್ಕ್ ಕುಟುಂಬ ನಿನ್ನೆ ಸಿರಗುಪ್ಪಗೆ ತೆರಳಿತ್ತು. ಈ ವೇಳೆ ಮನೆಯಲ್ಲಿದ್ದ ಫ್ರಿಜ್ ಏಕಾಏಕಿ ಸ್ಪೋಟಗೊಂಡಿದೆ. ಇದರಿಂದಾಗಿ ಮನೆಯ ಗೋಡೆ ಹಾಗೂ ಛಾವಣಿಯೂ ಕುಸಿದಿದೆ. ಜೊತೆಗೆ ಇಡೀ ಮನೆಗೆ ಬೆಂಕಿ ಆವರಿಸಿದೆ. ಮನೆಯಲ್ಲಿದ್ದ 2.5 ಲಕ್ಷ ರೂ. ನಗದು ಸೆರಿದಂತೆ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಫ್ರಿಜ್‌ ಬಳಕೆದಾರರಲ್ಲಿ ಆತಂಕ ಮೂಡಿಸಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *