ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿರುವ ಘಟಕವೊಂದರಲ್ಲಿ ಶನಿವಾರ ಮುಂಜಾನೆ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೌರಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.ಭಿವಂಡಿ ಪಟ್ಟಣದ ಕಲ್ಯಾಣ್ ನಾಕಾ ಸಮೀಪವಿರುವ ‘ಖೋಕಾ ಕಾಂಪೌಂಡ್’ ಆವರಣದಲ್ಲಿ ಮಧ್ಯರಾತ್ರಿ ಕಳೆದ ‘ನಂತರ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ನಾಗರಿಕ ವಿಪತ್ತು ನಿರ್ವಹಣ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ಮಾಹಿತಿ ನೀಡಿದ್ದಾರೆ. ಬೆಂಕಿಯ ಕೆನ್ನಾಲಿಗೆಯನ್ನು ನಿಯಂತ್ರಿಸಲು ಭಿವಂಡಿಯಿಂದ ನಾಲ್ಕು ಮತ್ತು ಕಲ್ಯಾಣ್‌ನಿಂದ ಒಂದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ರಾತ್ರಿಯಿಡೀ ಸತತ ಕಾರ್ಯಾಚರಣೆ ನಡೆಸಿವೆ. ಘಟನೆಯಲ್ಲಿ ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಸದ್ಯ ಬೆಂಕಿಯನ್ನು ನಂದಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

