Breaking News

ಪಳ್ಳಿ: ಪಡು ಕಲ್ಲಾಪು ಗ್ರಾಮದಲ್ಲಿ ಅಗ್ನಿ ಅವಘಡ

ಕಾರ್ಕಳ: ಪಳ್ಳಿ ಗ್ರಾಮದ ಪಡು ಕಲ್ಲಾಪು ಎಂಬಲ್ಲಿ ಶನಿವಾರ ಮಧ್ಯಾಹ್ನ ಮೂರು ಎಕ್ರೆ ಜಾಗದಲ್ಲಿ ಹಲವೆಡೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬಂದಿ ತ್ವರಿತ ಕಾರ್ಯಾಚರಣೆಯಿಂದಾಗಿ ಸಮೀಪದ ವಸತಿ ಪ್ರದೇಶಗಳಿಗೆ ವ್ಯಾಪಿಸಬಹುದಾಗಿದ್ದ ಬೆಂಕಿಯನ್ನು ನಂದಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಮರದ ಗೆಲ್ಲುಗಳು ವಿದ್ಯುತ್ ಲೈನ್‌ಗೆ ತಗಲಿದ ಪರಿಣಾಮ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೈದಾನದಲ್ಲಿದ್ದ ಒಣಗಿದ ಹುಲ್ಲು ಹಾಗೂ ಕಾಡು ಗಿಡಗಳಿಗೆ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಈ ಭಾಗದಲ್ಲಿ ಅನೇಕ ಮನೆಗಳಿದ್ದು, ಗಾಳಿಯ ರಭಸಕ್ಕೆ ಬೆಂಕಿ ಮನೆಗಳತ್ತ ನುಗ್ಗುವ ಭೀತಿ ಎದುರಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಅಗ್ನಿಶಾಮಕ ದಳದ ಸಿಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಶೇಖರ್ ದೇವಾಡಿಗ ಅವರ ನೇತೃತ್ವದಲ್ಲಿ ಸಿಬಂದಿ ಹರಿಪ್ರಸಾದ್, ನಾಗಪ್ಪ, ನಿತ್ಯಾನಂದ ಹಾಗೂ ಭೀಮಪ್ಪ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಬೆಂಕಿಯನ್ನು ನಿಯಂತ್ರಿಸಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *