Breaking News

ಮಹಾರಾಷ್ಟ್ರದಲ್ಲಿ ಭೀಕರ ಸ್ಫೋಟ: 15 ಮಂದಿ ದಾರುಣ ಸಾವು

ಮಹಾರಾಷ್ಟ್ರದಲ್ಲಿ ನಾಗ್ಪುರ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ದುರ್ಘಟನೆ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ನಡೆದಿದೆ. ಸ್ಫೋಟಕಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಮಹಿಳೆಯರು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದರೆ, 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗೆ 6 ಗಂಟೆಯ ಪಾಳಿಗೆ ಸುಮಾರು 35 ಕಾರ್ಮಿಕರು ಕೆಲಸಕ್ಕೆ ಬಂದಿದ್ದು, ಬೆಳಗ್ಗೆ 7ರಿಂದ 7.15ರ ನಡುವೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿದ್ದು, ಕಂಪನಿ ಶೀಘ್ರದಲ್ಲೇ ಅಧಿಕೃತ ಹೇಳಿಕೆ ನೀಡುವುದಾಗಿ ತಿಳಿಸಿದೆ. ಈ ಘಟನೆ ಕುರಿತು ತನಿಖೆ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ಹೊರಬೀಳಬೇಕಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *