Breaking News

ಚಿನ್ನ ಪಡೆದು ಪರಾರಿಯಾಗಿದ್ದ ಆರೋಪಿ ಸೆರೆ

ಬೆಂಗಳೂರು: ಕೆಲಸ ಮಾಡುತ್ತಿದ್ದ ಚಿನ್ನಾಭರಣ ಮಳಿಗೆ ಮಾಲೀಕರಿಗೆ ವಂಚಿಸಿದ ವ್ಯಕ್ತಿಯನ್ನು ಭಾರತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಧರ್ಮವೀರ್ ಸಿಂಗ್ ಬಂಧಿತ ಆರೋಪಿ. ಈತನಿಂದ ₹33.50 ಲಕ್ಷ ಮೌಲ್ಯದ 230 ಗ್ರಾಂ ತೂಕದ ಆರು ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಪಿಎಚ್‌ ಜುಮಾ ಮಸೀದಿ ರಸ್ತೆಯಲ್ಲಿರುವ ಆಭರಣ ಅಂಗಡಿ ಮಾಲೀಕರು ಸೆಪ್ಟೆಂಬರ್ 23ರಂದು ಈ ಬಗ್ಗೆ ದೂರು ನೀಡಿದ್ದರು. ಆಭರಣ ಅಂಗಡಿಗೆ ಮಾಲೀಕರು ಮತ್ತೊಂದು ಆಭರಣ ಅಂಗಡಿಯಿಂದ ಚಿನ್ನಾಭರಣ ತರಲು ಆರೋಪಿಯನ್ನು ಕಳುಹಿಸಿದ್ದರು. ಅಂಗಡಿಯಿಂದ ಏಳು ಸರಗಳನ್ನು ತೆಗೆದುಕೊಂಡು ಕೆಲಸ ಮಾಡುತ್ತಿದ್ದ ಅಂಗಡಿಗೆ ಹೋಗದೆ ಆರೋಪಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು ಖಚಿತ ಮಾಹಿತಿ ಮೇರೆಗೆ ಯಶವಂತಪುರ ರೈಲ್ವೆ ನಿಲ್ದಾಣ ಬಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಯಿತು. ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಕೃತ್ಯವೆಸಗಿರುವುದು ಗೊತ್ತಾಗಿದೆ. ಆತನಿಂದ ಚಿನ್ನದ ಸರಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *