ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಸಿಇಐಆರ್ ತಂತ್ರಾಂಶದ ಮೂಲಕ ಪತ್ತೆಯಾಗಿದ್ದ ₹1.6 ಕೋಟಿ ಮೌಲ್ಯದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಜನವರಿಯಿಂದ ಈವರೆಗೆ ಪೂರ್ವ ವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, 641 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಇಂದಿರಾ ನಗರದಲ್ಲಿ ನಡೆದ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ವಾರಸುದಾರರಿಗೆ ಮೊಬೈಲ್ ಫೋನ್ ಹಸ್ತಾಂತರಿಸಿದರು. ಜಂಟಿ ಪೊಲೀಸ್ ಕಮಿಷನರ್ ಬಿ.ರಮೇಶ್, ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಹಾಜರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

