Breaking News

ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಕನಿಷ್ಠ 10 ಮಂದಿ ಮೃತ್ಯು, ಹಲವರಿಗೆ ಗಾಯ

ಮುಂಬೈ: ನಾಗ್ಪುರ ಜಿಲ್ಲೆಯ ಕಟೋಲ್ ನಲ್ಲಿರುವ ಕಾರ್ಖಾನೆಯೊಂದರಲ್ಲಿ ರವಿವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರ ಪೈಕಿ ಓರ್ವ ಮಹಿಳೆಯೂ ಸೇರಿದ್ದಾರೆ. ಸ್ಫೋಟಕಗಳ ತಯಾರಿಕಾ ಕಾರ್ಖಾನೆಯಲ್ಲಿ ಈ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಹಲವು ಕಿಲೋಮೀಟರ್ ದೂರದವರೆಗೆ ಭಾರಿ ಸ್ಫೋಟದ ಸದ್ದುಗಳು ಕೇಳಿ ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಕಟೋಲ್ ಶಾಸಕ ಚರಣ್ ಸಿಂಗ್ ಠಾಕೂರ್ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *