ನಂಜನಗೂಡಲ್ಲಿ ಹಳೇ ದ್ವೇಷದ ಹಿನ್ನೆಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಲಾಗಿದೆ. ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ಘಟನೆ ನಡೆದಿದೆ. ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ಆಕೆ ಪರೀಕ್ಷೆ ಮುಗಿಸಿ ಮನೆಗೆ ಬಂದಾಗ ವಿದ್ಯಾರ್ಥಿನಿಯ ಸಂಬಂಧಿ ಸೋಮಣ್ಣ ಎಂಬಾತ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪೂರ್ಣಿಮಾ ನೀನು ಓದಬಾರದು ಅಂತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ. ಯುವತಿಯ ನೆರವಿಗೆ ಬಂದ ಕುಟುಂಬಸ್ಥರ ಮೇಲೆಯೂ ಹಲ್ಲೆಗೆ ಮುಂದಾಗಿದ್ದಾನೆ. ಯುವತಿ ಪೂರ್ಣಿಮಾಳನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮಣ್ಣ ಸೇರಿ 7 ಜನರ ವಿರುದ್ಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

