Breaking News

ಬೆಂಗಳೂರು | ಚಾಕು, ಡ್ಯಾಗರ್‌ನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ

ವ್ಯಕ್ತಿಯೊಬ್ಬರನ್ನು ಚಾಕು ಹಾಗೂ ಡ್ಯಾಗರ್‌ನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶಿವನಹಳ್ಳಿಯಲ್ಲಿ ನಡೆದಿದೆ. ರಾತ್ರಿ ಸುಮಾರು 11.30ರ ವೇಳೆಗೆ ಶಶಿಕುಮಾರ್ ಎಂಬಾತನನ್ನು ದುಷ್ಕರ್ಮಿಗಳು ಇರಿದು ಕೊಲೆ ಮಾಡಲಾಗಿದೆ. ಘಟನೆ ಬಸವೇಶ್ವರನಗರ ವ್ಯಾಪ್ತಿಯಶ್ರೀ ಗುರು ರಾಘವೇಂದ್ರ ವೆಜ್ & ದೋಸೆ ಕಾರ್ನರ್ ಬಳಿ ನಡೆದಿದೆ. ಮೃತ ಶಶಿಕುಮಾರ್ ರಾತ್ರಿ ಊಟಕ್ಕಾಗಿ ಹೋಟೆಲ್‌ಗೆ ಬಂದಿದ್ದ ವೇಳೆ ಗಲಾಟೆ ಸಂಭವಿಸಿದೆ ಎನ್ನಲಾಗಿದೆ. ಈ ವೇಳೆ ಇಬ್ಬರು ವ್ಯಕ್ತಿಗಳು ಚಾಕು ಮತ್ತು ಡ್ಯಾಗರ್‌ನಿಂದ ಇರಿದು ಪರಾರಿಯಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕೊಲೆ ನಡೆದಿದೆಯೇ? ಅಥವಾ ಹಳೆಯ ವೈಷಮ್ಯವೇ ಹತ್ಯೆಗೆ ಕಾರಣವೇ? ಎಂಬ ದಿಕ್ಕಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *