ಕೋಲಾರ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ ಮೂರು ವರ್ಷದ ಅವಳಿ ಮಕ್ಕಳ ಜೊತೆ ನೀರಿ ಸಂಪ್ ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಘಟನೆಯಲ್ಲಿ ಮಕ್ಕಳು ಸಾವನಪ್ಪಿದ್ದು, ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕೋಡಗುರ್ಕಿ ಗ್ರಾಮದ ಮುರುಳಿ ಅವರ ಪತ್ನಿ ಉಷಾ (28) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದು, ಹರ್ಷಿತ್ ಮತ್ತು ಹಿತೇಶ್ ಮೃತ ಮಕ್ಕಳಾಗಿದ್ದಾರೆ. ಕುಟುಂಬದಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಬೆಳಗ್ಗೆ ಸುಮಾರು 9.30ರ ಸುಮಾರಿಗೆ ಉಷಾ ತನ್ನ ಇಬ್ಬರು ಮಕ್ಕಳೊಂದಿಗೆ ಬೂದಿಕೋಟಿಗೆ ತೆರಳಿದ್ದಾಳೆ. ಐತಿಹಾಸಿಕ Hyder Ali Fort ಪ್ರದೇಶದಲ್ಲಿರುವ ನೀರಿನ ಸಂಪಿನಲ್ಲಿ ಮಕ್ಕಳನ್ನು ಮುಳುಗಿಸಿದ್ದಾಳೆ, ಬಳಿಕ ತಾನೂ ಅದೇ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳದಲ್ಲಿದ್ದ ಪ್ರವಾಸಿ ಮಿತ್ರ ಸಿಬ್ಬಂದಿಗೆ ಅನುಮಾನ ಉಂಟಾಗಿ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಅಲ್ಲಿದ್ದ ಪ್ರವಾಸಿಗರು ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲೇ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಾಥಮಿಕ ತನಿಖೆಯ ಮಾಹಿತಿ ನೀಡಿದ್ದು, ಕೌಟುಂಬಿಕ ಕಲಹವೇ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ ಎಂದು ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆಯನ್ನು ಮುಂದುವರೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

