ನಗರದ ಜಿಲ್ಲಾ ನ್ಯಾಯಾಲಯಕ್ಕೆ ಅನಾಮಿಕರರೊಬ್ಬರು ಹುಸಿ ಬಾಂಬ್ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಇಲಾಖೆ ಮತ್ತು ಶ್ವಾನದಳದಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್ ಗೆ ಅನಾಮಿಕ ವ್ಯಕ್ತಿಯೋರ್ವ ಬಾಂಬ್ ಬೆದರಿಕೆ ಹಾಕಿರುವ ಹಿನ್ನೆಲೆ ಮಂಗಳವಾರ ಬೆಳಗ್ಗೆ ನ್ಯಾಯಾಲಯದ ಆವರಣದಲ್ಲಿರುವ ವಕೀಲರನ್ನು, ಕಕ್ಷಿದಾರರನ್ನು ಕೋರ್ಟ್ ಆವರಣದಿಂದ ಹೊರಗೆ ಕಳುಹಿಸಲಾಗಿದೆ. ಬಾಂಬ್ ಬೆದರಿಕೆ ಹಾಕಿರುವ ಬೆನ್ನಲ್ಲೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ಸಿಬ್ಬಂದಿ, ಶ್ವಾನ ದಳದ ಸಿಬ್ಬಂದಿಯವರು ತಪಾಸಣೆ ನಡೆಸಿಡುತ್ತಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

