Breaking News

ಕುಡಿದ ಮತ್ತು: ಕ್ಷುಲ್ಲಕ ವಿಚಾರಕ್ಕೆ ಗೆಳೆಯರಿಬ್ಬರ ನಡುವೆ ಜಗಳ, ಕೊಲೆಯಲ್ಲಿ ಅಂತ್ಯ

ಯಾದಗಿರಿ: ಟಿಪ್ಪರ್ ಚಾಲಕರಿಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಹತ್ತಿರ ಸೋಮವಾರ (ಮಾ.2) ತಡರಾತ್ರಿ ನಡೆದಿದ್ದು ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಬಸನಗೌಡ(30) ಕೊಲೆಯಾದ ವ್ಯಕ್ತಿಯಾಗಿದ್ದು, ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಗಲಾಟೆಯಾಗಿದೆ. ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು ಕೆಲಸದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾಗಿದೆ ಎನ್ನಲಾಗುತ್ತಿದೆ. ಜಗಳ ತಾರಕಕ್ಕೆ ಏರಿ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್, ಡಿವೈಎಸ್ಪಿ ಜಾವೇದ್ ಇನಾಮ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಬಸನಗೌಡ ತಾಳಿಕೋಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *