ಕೋಲಾರ: ತಾಲ್ಲೂಕಿನ ತಲಗುಂದ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೋನೇಟರ್ ಪತ್ತೆಯಾಗಿವೆ. ವೇಮಗಲ್ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಗ್ರಾಮದ ಮೆಹಬೂಬ್ ಪಾಷಾ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಜಮೀನಿನಲ್ಲಿನ ಬಂಡೆ ಸ್ಫೋಟಕ್ಕೆ ಬಳಸಲು ತಂದಿದ್ದಾಗಿ ಆತ ಹೇಳಿದ್ದು, ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಶ್ವಾನದಳ, ಸೋಕೊ ತಂಡ ಪರಿಶೀಲನೆ ನಡೆಸಿದ್ದು, ಎಲ್ಲಿಂದ ತರಲಾಗಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

