ಬೆಂಗಳೂರು: ಆಸ್ಪತ್ರೆಯಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಜಯನಗರದಲ್ಲಿ ಇರುವ ಆಸ್ಪತ್ರೆಯೊಂದರ ಕಾರ್ಯಕಾರಿ ನಿರ್ದೇಶಕರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ‘ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ತ್ರಿವಿಕ್ರಂ ರಾವ್ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಮೂರು ದಿನಗಳ ಹಿಂದೆ ಸಂತ್ರಸ್ತೆ ನೀಡಿದ ದೂರಿನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ದೂರು ನೀಡಿದ ಮಹಿಳೆ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಸಭೆ ಹಾಗೂ ವೃತ್ತಿ ಸಂಬಂಧ ಚರ್ಚೆ ನಡೆಸುವುದಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ’ ಎಂದು ದೂರು ನೀಡಲಾಗಿದೆ. ‘ದೂರಿನ ಮೇರೆಗೆ ಆರೋಪಿ ವಿರುದ್ಧ ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ. ತ್ರಿವಿಕ್ರಂ ರಾವ್ ಅವರು ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

