Breaking News

ಹೊಲಕ್ಕೆ ಹೋಗಿ ಕಾಣೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ದೋಟಿಕೊಳ್ ಗ್ರಾಮದಲ್ಲಿ 25 ವರ್ಷದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ದೋಟಿಕೊಳ ಗ್ರಾಮದ ಶರಣು ಗುಂಡಪ್ಪ ಭೋಸಗಿ(25) ಮೃತ ವ್ಯಕ್ತಿ. ಕಡಲೆ ಬೆಳೆ ಕಾಯಲು ಹೊಲಕ್ಕೆ ಹೋಗಿದ್ದು, ಮನೆಗೆ ಮರಳಿರಲಿಲ್ಲ. ಇದರಿಂದ ಸಂಶಯಗೊಂಡು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಯುವಕ ಕಣ್ಮರೆಯಾದ ಕುರಿತು ದೂರು ದಾಖಲಾಗಿತ್ತು ಎಂದು ಎಸ್‌ಐ ಗಂಗಮ್ಮ ಜಿನಿಕೇರಿ ತಿಳಿಸಿದರು. ಬೆನ್ನಲ್ಲಿಯೇ ದೋಟಿಕೊಳ ಗ್ರಾಮದ ಸಣ್ಣ ನೀರಾವರಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಮೃತನ ಕಾಲಿಗೆ ಹಗ್ಗ ಬಿಗಿಯಲಾಗಿದೆ ಎಂದು ಹೇಳಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿಗೆ ಕೊಂಡೊಯ್ಯಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *