Breaking News

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ

ಚಾಮರಾಜನಗರ |ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಬಳಿ ಹರಿಯೋ ಕಾವೇರಿ ನದಿಲ್ಲಿ ಗೃಹಿಣಿಯ ಶವ ಪತ್ತೆಯಾಗಿದೆ. ಮೃತಳನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ರಶ್ಮಿ ಕಾವೇರಿ ನದಿಗೆ ಹಾರಿ ರಶ್ಮಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಶ್ಮಿ ಮಂಡ್ಯ ಜಿಲ್ಲೆಯ ಬೆಳಕವಾಡಿ ಗ್ರಾಮದ ನಿವಾಸಿ ಲೋಕೇಶ್ ಎಂಬುವವರ ಪತ್ನಿ ಎಂದು ತಿಳಿದುಬಂದಿದೆ.ಗಂಡ ಹಾಗೂ ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ವಾಸವಿದ್ದ ರಶ್ಮಿ, ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸಾಂಸರಿಕ ಗಲಾಟೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಆಯಾಮದಲ್ಲೂ ತನಿಖೆ ಮುಂದವರೆದಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *