Breaking News

ಹಾವೇರಿ | ಶೋಕಿಗಾಗಿ ಮನೆಗಳಲ್ಲಿ ಕಳ್ಳತನ ಮಾಡ್ತಿದ್ದ ಅಪ್ರಾಪ್ತ ಬಾಲಕ ಅರೆಸ್ಟ್..!

ಹಾವೇರಿ : ಶೋಕಿಗಾಗಿ ಮನೆಗಳ ಕಳ್ಳತನ ಮಾಡ್ತಿದ್ದ ಅಪ್ರಾಪ್ತ ಬಾಲಕನನ್ನು ಹಾವೇರಿ ಜಿಲ್ಲೆ ಬ್ಯಾಡಗಿ ಪೊಲೀಸರು ಮಹತ್ವದ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಪ್ರವೀಣ ಕರಿಯಪ್ಪ ಎಂಬಾತ ಆರೋಪಿಯಾಗಿದ್ದಾನೆ. ಆರೋಪಿಯು ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿ ಎಸ್ಕೇಪ್‌ ಆಗಿದ್ದು, ಬರೋಬ್ಬರಿ 14 ಲಕ್ಷ ರೂ.ಬೆಲೆಯ ಚಿನ್ನಾಭರಣ ದೋಚಿದ್ದನು ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಚರಣೆ ಇಳಿದಿದ್ದರು. ತನಿಖೆಯಲ್ಲಿ ತಿಳಿದಂತೆ ನಿತ್ಯ ಶೋಕಿಗಾಗಿ ಅಪ್ರಾಪ್ತ ವಯಸ್ಸಿನ ಆರೋಪಿ ಕಳ್ಳತನ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ಈ ಘಟನೆ ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *