Breaking News

ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಳಿಕ ಡಿವೈಡರ್‌ಗೆ ಗುದ್ದಿ ಪಲ್ಟಿ: ಓರ್ವ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತರನ್ನು ಆಂಧ್ರಪ್ರದೇಶ ಮೂಲದ ಬಶೀರ್ (40) ಎಂದು ಗುರುತಿಸಲಾಗಿದೆ. ಅತಿ ವೇಗದಲ್ಲಿ ಸಂಚರಿಸುತ್ತಿದ್ದ ಕಾರು ಮೊದಲು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಬಳಿಕ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಅಪ್ಪಳಿಸಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *