Breaking News

ಬೀರಬ್ಬಿಯಲ್ಲಿ ಯುವಕನ ಕೊಲೆ: ಚೀಲದಲ್ಲಿ ಮೃತ ದೇಹ ಪತ್ತೆ

ಹೂವಿನಹಡಗಲಿ : ತಾಲೂಕಿನ ಬೀರಬ್ಬಿ ಗ್ರಾಮದಲ್ಲಿ ಬೀರೇಶ (25) ಎಂಬ ಯುವಕನ ಕೊಲೆ ಮಾಡಿ, ದೇಹವನ್ನು ಕತ್ತರಿಸಿ ಚೀಲದಲ್ಲಿ ತುಂಬಿ ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕುರಿ ಕಾಯುವ ಕೆಲಸ ಮಾಡುತ್ತಿದ್ದ ಬೀರೇಶ ಕಳೆದ 15 ದಿನಗಳಿಂದ ಕಾಣೆಯಾಗಿದ್ದರು. ಆದರೆ, ಬುಧವಾರ ಸಂಜೆ ಬೀರೇಶ ಅವರ ಮನೆಯ ಹಿಂಭಾಗದಲ್ಲಿ ಮೃತ ದೇಹ ಪತ್ತೆಯಾಗಿದೆ. ಪ್ರಾಣಿ ಸತ್ತಿರುವ ವಾಸನೆ ಬರುತ್ತಿದೆ ಎಂದು ಸ್ಥಳೀಯರು ಗಮನಿಸಿದಾಗ, ಒಂದು ಚೀಲ ಕಂಡು ಬಂದಿದ್ದು, ಅದನ್ನು ತೆರೆದಾಗ ಬೀರೇಶ ಅವರ ದೇಹದ ಭಾಗಗಳು ಕಂಡು ಬಂದಿದೆ. ಕೂಡಲೇ ಗ್ರಾಮಸ್ಥರು ಹಿರೇಹಡಗಲಿ ಪೊಲೀಸಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಎಸ್‌.ಜಾಹ್ನವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿವೈಎಸ್‌ಪಿ ಸಂತೋಷ್ ಚೌವ್ಹಾಣ್, ಸಿಪಿಐ ಮಲ್ಲಪ್ಪ ಹೂಗಾರ ಹಾಗೂ ಇತರರಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *