Breaking News

ಬೆಳ್ಳಂಬೆಳಗ್ಗೆ‌ ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಶಾಕ್: ಬೆಂಗಳೂರಿನ 4 ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಬಿಸಿಮುಟ್ಟಿಸಿದ್ದು, ಬೆಂಗಳೂರಿನ ನಾಲ್ಕು ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ ನಡೆಸಿದೆ. ಕೆಆರ್‌ಐಡಿಎಲ್ ಚೀಫ್ ಎಂಜಿನಿಯರ್ ವಸಂತ್ ವಿ ನಾಯಕ್, ಬಿಡಿಎ ವ್ಯಾಪ್ತಿಯ ಆರ್‌ಎಫ್‌ಓ ಡಾಲೇಶ್, ರೈತ ಸೇವಾ ಸಹಕಾರ ಸಂಘದ ಸಿಇಓ ಶಶಿಧರ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಯಾದಗಿರಿಯ ವಿದ್ಯುತ್ ಇಲಾಖೆಯ ಉಪ ವಿದ್ಯುತ್ ಪರಿವೀಕ್ಷಕ ವೀರೇಶ್ ಹಿರೇಮಠ, ಮಂಡ್ಯದ ಲೋಕೋಪಯೋಗಿ ಇಲಾಖೆಯ ಮಂಡ್ಯ ಉಪವಿಭಾಗದ ಎಎಇ ಎಸ್ ಸತೀಶ್, ಧಾರವಾಡದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾ ಎಂ.ಕೆ.ಸುರಕೋಡ, ಹಾಸನ ಮಹಾನಗರ ಪಾಲಿಕೆಯ ಎಎಇ ಎಂ.ಸಿ ಸತ್ಯನಾರಾಯಣ, ಮೈಸೂರಿನ, ಜಲ ಭವನದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಎಇ ಮತ್ತು ಇಇ ಆಸಿಫ್ ಇಕ್ಬಾಲ್ ಹಾಗೂ ವಿಜಯಪುರದ ಕೃಷ್ಣಾ ಭಾಗ್ಯ ಜಲ ನಿಗಮದಲ್ಲಿ ಕಿರಿಯ ಇಂಜಿನಿಯರ್ ಆಗಿರುವ ಪ್ರಕಾಶ್ ಪಿ.ಜಿ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *