ಹೊಸಪೇಟೆ: ತಾಲ್ಲೂಕಿನ ಕಾಕುಬಾಳ ಗ್ರಾಮದ ಜೋಳದ ರಸ್ತೆ ಕರಿಯಮ್ಮನ ಗುಡಿ ಹತ್ತಿರವಿರುವ ಮನೆಯೊಂದರ ಮುಂದೆ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 2.10 ಲಕ್ಷ ಮೌಲ್ಯದ 60.80 ಕ್ವಿಂಟಲ್ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದಾಗ ಯಾವುದೇ ಪರವಾನಗಿ ಇಲ್ಲದೆ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿ ಮೂಟೆಗಳು ಪತ್ತೆಯಾದವು. ಈ ಕುರಿತು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಮತ್ತು ಸಾಗಾಣಿಕೆ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಇಂತಹ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

