Breaking News

ಹಾಸನ | ವೇಶ್ಯಾವಾಟಿಕೆ ಆರೋಪ: ಲಾಡ್ಜ್ ನಿಂದ ಮೂವರು ವಿದೇಶಿ ಮಹಿಳೆಯರ ರಕ್ಷಣೆ

ಹಾಸನ: ವಿದೇಶಿ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಆರೋಪದಲ್ಲಿ ನಗರದ ಹೊರವಲಯದಲ್ಲಿರುವ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು, ಈ ಸಂಬಂಧ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನಗರದ ಬೂವನಹಳ್ಳಿ ಸಮೀಪ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ‘ಕರಾವಳಿ ಕಂಫರ್ಟ್’ಲಾಡ್ಜ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಬಡಾವಣೆ ಪೊಲೀಸ್ ಠಾಣೆಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬಡಾವಣೆ ಠಾಣೆ ಪೊಲೀಸರು ಹಾಗೂ ‘ಒಡನಾಡಿ’ಸಂಸ್ಥೆಯ ಕಾರ್ಯಕರ್ತರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ ಲಾಡ್ಜ್ ನಲ್ಲಿದ್ದ ಮೂವರು ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ. ಅವರನ್ನು ವಿದೇಶದಿಂದ ಕರೆತರಲಾಗಿದ್ದು, ಅಕ್ರಮ ದಂಧೆಗೆ ಬಳಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಕೆಲ ಪುರುಷರು ದಾಳಿಯ ವೇಳೆ ಸ್ಥಳದಿಂದ ಪರಾರಿಯಾಗಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *