ಸಿರುಗುಪ್ಪ: ನಗರದ ಹೊರವಲಯದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ನಗರದ ಪೊಲೀಸರು ಬಂಧಿಸಿದ ಘಟನೆ ಮಾ.4ರ ಬುಧವಾರ ನಡೆದಿದೆ. ನಗರದ 3ನೇ ವಾರ್ಡ್ ನಿವಾಸಿ ಇರ್ಫಾನ್ ಬಂಧಿತ ಆರೋಪಿ. ನಗರದ ಆದೋನಿ ರಸ್ತೆಯ ತಾಯಮ್ಮ ದೇವಸ್ಥಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇರ್ಫಾನ್ ನನ್ನು ಬಂಧಿಸಿ, 5 ಸಾವಿರ ಮೌಲ್ಯದ 50 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

