Breaking News

ಎಥಿನಾಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಬೆಂಕಿ; ಚಾಲಕ ಪಾರು

ರಾಣೆಬೆನ್ನೂರ: ಎಥಿನಾಲ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಧಗಧಗನೆ ಹೊತ್ತಿ ಉರಿದ ಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ&48ರಲ್ಲಿ ಗುರುವಾರ ನಡೆದಿದೆ. ಲಾರಿಯು ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಸರ್ವೀಸ್ ರಸ್ತೆ ದಾಟಿ ಜಮೀನುವೊಂದರ ಬಳಿ ಬಿದ್ದು ನಿಂತಿದೆ. ಇದರಿಂದ ಬೆಂಕಿ ಹತ್ತಿಕೊಂಡಿದ್ದು ಕೆಲ ಹೊತ್ತಿನಲ್ಲಿ ಧಗಧಗನೆ ಉರಿಯಲು ಶುರುವಾಗಿದೆ. ಚಾಲಕ ಕೂಡಲೇ ಪಾರಾಗಿದ್ದು, ಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *