Breaking News

5 ಲಕ್ಷ ರೂ. ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ: ನಕಲಿ ಪತ್ರಕರ್ತ ಅರೆಸ್ಟ್

ಹಾವೇರಿ: 5 ಲಕ್ಷ ರೂಪಾಯಿ ಸಾಲ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ ಅತ್ಯಾಚಾರ ಎಸಗಿದ ಬಳಿಕ ಖಾಸಗಿ ಕ್ಷಣದ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ ನಕಲಿ ಪತ್ರಕರ್ತನನ್ನು ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.ದೀಪಕ್ ಉಪಳೆ ಬಂಧಿತ ಆರೋಪಿ. ಮಹಿಳೆಗೆ 5 ಲಕ್ಷ ರೂ ಸಾಲ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ ಲಾಡ್ಜ್ ಸೇರಿದಂತೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಖಾಸಗಿ ವಿಡಿಯೋ ಮಾಡಿಕೊಂಡಿದ್ದಾನೆ. ಬ್ಲಾಕ್ ಮೇಲ್ ಮಾಡಿ ನಿರಂತರ ಲೈಂಗಿಕ ಸಂಪರ್ಕದಲ್ಲಿರುವಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ. ಸಹಕರಿಸದಿದ್ದರೆ ವಿಡಿಯೋ ಹರಿಬಿಡುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *