Breaking News

ಬೈಕ್-ಕಾರ್ ಮುಖಾಮುಖಿ ಡಿಕ್ಕಿ: ಗದಗದಲ್ಲಿ ಮೂವರು ಸವಾರರು ದುರ್ಮರಣ

ಗದಗ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವುಂಡಿ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಮೃತರನ್ನು ಜಂತಲಿ ಗ್ರಾಮದ ಶಿವು ಪಾಟ್ಲಿ (28), ಆನಂದ ಲಕ್ಷ್ಮೇಶ್ವರಮಠ (30) ಹಾಗೂ ಮುತ್ತು ಮುದುಗಣ್ಣವರ್ (30) ಎಂದು ಗುರುತಿಸಲಾಗಿದೆ. ಮುಂಡರಗಿಯಿಂದ ಜಂತ್ಲಿಶಿರೂರು ಗ್ರಾಮದತ್ತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಡೋಣಿಯಿಂದ ಮುಂಡರಗಿ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಮಾಹಿತಿ ತಿಳಿದು ಮುಂಡರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *