Breaking News

₹10,000 ಲಂಚ: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಪಾಲಿಕೆ ಸಿಬ್ಬಂದಿ ಬಂಧನ

ಬೆಂಗಳೂರು: ಗುತ್ತಿಗೆದಾರರೊಬ್ಬರಿಂದ ₹10,000 ಲಂಚ ಪಡೆಯುತ್ತಿದ್ದ ವೇಳೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಪಾಲಿಕೆಯ ಸ್ಯಾನಿಟರಿ ಸೂಪರ್‌ವೈಸರ್‌ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ನಗರದ ಕಾವಲ್‌ ಬೈರಸಂದ್ರದ ವ್ಯಾಪ್ತಿಯಲ್ಲಿ ಗುತ್ತಿಗೆದಾರ ಅಬ್ದುಲ್‌ ರೆಹಮಾನ್‌ ಅವರು ರಸ್ತೆ ದುರಸ್ತಿ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಅಲ್ಲಿದ್ದ ಚಿಪ್ಪಿಂಗ್‌ ಯಂತ್ರವನ್ನು ನಗರ ಪಾಲಿಕೆಯ ಆರೋಗ್ಯ ವಿಭಾಗದ ಸ್ಯಾನಿಟರಿ ಸೂಪರ್‌ವೈಸರ್‌ ಎಂ.ನಾಗರಾಜ ಅವರು ಅನಧಿಕೃತವಾಗಿ ಜಪ್ತಿ ಮಾಡಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಯಂತ್ರವನ್ನು ಬಿಡುಗಡೆ ಮಾಡಲು ₹10,000 ಲಂಚ ನೀಡುವಂತೆ ನಾಗರಾಜ ಅವರು ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಬ್ದುಲ್‌ ಅವರು ನೀಡಿದ್ದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ಅಬ್ದುಲ್‌ ಅವರು ನಾಗರಾಜ ಅವರಿಗೆ ಗುರುವಾರ ಹಣ ನೀಡಿದ್ದರು. ಈ ವೇಳೆ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್‌ ದೇವರಾಜ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಲಂಚದ ಹಣವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *