ಬೀದರ್: ಜಿಲ್ಲೆಯಲ್ಲಿ ಮೌಲ್ವಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಠಾಣೆ ಮುಂದೆ ಉದ್ರಿಕ್ತ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಈ ಪ್ರಕರಣದಲ್ಲಿ ದಾಖಲಾದ 49 ಆರೋಪಿಗಳ ಪೈಕಿ 20 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಸಂದರ್ಭದಲ್ಲಿ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಎದುರು ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿದ್ದು, ಪೊಲೀಸ್ ವಾಹನ ಸೇರಿದಂತೆ ಇಲಾಖೆಯ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಕಲ್ಲು ತೂರಾಟದಿಂದ ಡಿಎಆರ್ ವಾಹನಕ್ಕೂ ಹಾನಿ ಉಂಟಾಗಿರುವುದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಬಂಧಿತ ಆರೋಪಿಗಳ ವಿಚಾರಣೆ ನಡೆಯುತ್ತಿದ್ದು, ಪ್ರಕರಣದ ತನಿಖೆಯನ್ನು ಬಸವಕಲ್ಯಾಣ ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಇದೇ ವೇಳೆ ಮೌಲ್ವಿಗಳ ಮೇಲೆ ಹಲ್ಲೆ ನಡೆಸಿದ ಐದು ಜನರನ್ನು ಕೂಡ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

