ಕೋಟ: ಬ್ರಹ್ಮಾವರದ ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ನಡೆದಿರುವ ಕುರಿತು ಪ್ರಕರಣ ದಾಖಲಾಗಿದೆ. ಶಿರಿಯಾರ ನಿವಾಸಿ ಎಸ್. ಯೋಗೀಶ್ ವಂಚನೆಗೊಳಗಾದವರು. ಇವರು ಕ್ಯಾಶ್ಯೂ ಇಂಡಸ್ಟ್ರೀಸ್‌ನ ಮಾಲಕರಾಗಿದ್ದು, ಸಂಸ್ಥೆಯಲ್ಲಿ ತೆಂಗಿನ ಕಾಯಿ, ಕೊಬ್ಬರಿ ಹಾಗೂ ಅಡುಗೆ ಎಣ್ಣೆ ಖರೀದಿ-ಮಾರಾಟ ಮತ್ತು ಗೇರು ಬೀಜ ಸಂಸ್ಕರಣೆ ಕಾರ್ಯ ನಡೆಸುತ್ತಿದ್ದರು. ಸಂಸ್ಥೆಯಲ್ಲಿ ಲೆಕ್ಕಪತ್ರ ನಿರ್ವಹಣೆ ಹಾಗೂ ದಾಸ್ತಾನು ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿದ್ದ ರತೀಶ್ ತನ್ನ ಸ್ನೇಹಿತರಾದ ರಾಜೇಶ್ ಮತ್ತು ಸುಮಂತ್ ಸೇರಿದಂತೆ ಇತರರೊಂದಿಗೆ ಸೇರಿ 2023ರ ಏ. 1ರಿಂದ 2025ರ ಮೇ 18ರವರೆಗೆ ಸಂಸ್ಥೆಗೆ 56ಲಕ್ಷ ರೂ. ಮೌಲ್ಯದ ಕೊಬ್ಬರಿ ಹಾಗೂ 1,05,72,900 ಮೌಲ್ಯದ ತೆಂಗಿನ ಕಾಯಿಯನ್ನು ಅಕ್ರಮವಾಗಿ ಮಾರಾಟ ಮಾಡಿದ್ದು, ಒಟ್ಟು 1,61,74,500 ರೂ. ಮೊತ್ತವನ್ನು ದುರುಪಯೋಗಪಡಿಸಿಕೊಂಡು ಸಂಸ್ಥೆಗೆ ಆರ್ಥಿಕ ನಷ್ಟ ಉಂಟುಮಾಡಿರುವುದಾಗಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

