Breaking News

ಲಾರಿ ಚಕ್ರಕ್ಕೆ ಸಿಲುಕಿದ ಬೈಕ್: ಸವಾರ ಸ್ಥಳದಲ್ಲೇ ಸಾವು

ನೆಲಮಂಗಲ: ಬೈಕ್‌ ಆಯತಪ್ಪಿ ಲಾರಿ ಚಕ್ರಕ್ಕೆ ಸಿಲುಕಿದ ಹಿನ್ನೆಲೆಯಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ತಾಳೇಕೆರೆ ಗ್ರಾಮದ ಬೆಂಗಳೂರು-ತುಮಕೂರು ರಸ್ತೆಯಲ್ಲಿ ನಡೆದಿದೆ. ಜಾರ್ಖಂಡ್‌ ಮೂಲದ ಮೋಹನ್‌ ಪಂಡಿತ್‌ (27) ಮೃತ ದುರ್ದೈವಿ. ಫೈರ್‌ ಯಂತ್ರ ಅಳವಡಿಕೆ ಕೆಲಸ ಮಾಡುತ್ತಿದ್ದನು. ಈತ ಬುಧವಾರ ಬೆಳಗ್ಗೆ ನೆಲಮಂಗಲದ ಲ್ಯಾಂಕೋ ಟೋಲ್‌ ಕಡೆಯಿರುವ ಗೋದಾಮಿನಲ್ಲಿ ಯಂತ್ರ ಅಳವಡಿಕೆ ಕೆಲಸ ಮುಗಿಸಿಕೊಂಡು ದಾಬಸ್‌ಪೇಟೆಗೆ ಬರುವಾಗ ತಾಳೆಕೆರೆ ಸಮೀಪ ಬೈಕ್‌ ಆಯತಪ್ಪಿಆದ ಪರಿಣಾಮ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬೈಕ್‌ ಹಿಂಬದಿ ಕುಳಿತಿದ್ದ ಮೃತನ ಸಹೋದರ ಭೂದೇವ್‌ ಪಂಡಿತ್‌ ಕಾಲಿಗೂ ಗಾಯಗಳಾಗಿದ್ದು, ಅದೃಷ್ಟವಷಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *