ಬೆಂಗಳೂರು: ಬಾಲಕಿ ಜೊತೆ ಅನುಚಿತ ವರ್ತನೆ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಾಲಕಿಯೊಬ್ಬಳನ್ನು ತೊಡೆ ಮೇಲೆ ಕೂರಿಸಿಕೊಂಡು ಮನಬಂದಂತೆ ವರ್ತಿಸಿದ ಮಲ್ಲಿಕಾರ್ಜುನ ಮುತ್ಯಾ ವಿಡಿಯೋ ವೈರಲ್ ಅಗಿತ್ತು. ಇದರ ಬೆನ್ನಲ್ಲೇ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು. ಈ ಸಂಬಂಧ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಸ್ಕೋ ಖಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೇ ಅವರ ಪರವಾಗಿ ಅವರ ಭಕ್ತರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದರು. ನಮ್ಮ ಮುತ್ಯಾ ಯಾವ ತಪ್ಪೂ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಯಾರು ಏನೇ ಹೇಳಿದರೂ ಕಾನೂನು ಪ್ರಕಾರ ಕ್ರಮವಾಗುತ್ತಿದೆ. ಇದೀಗ ಮುತ್ಯಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಪ್ರಕರಣದ ಬಗ್ಗೆ ತನಿಖೆ ಮುಂದುವರಿಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

