Breaking News

ಬೆಳಾಲು; ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರಿಂದ ದಾಳಿ

ಮಡಂತ್ಯಾರು: ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾ. 4ರಂದು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ಜೂಜಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಸ್ಥಳದಲ್ಲಿದ್ದ ಕೆಲವರನ್ನು ವಿಚಾರಣೆ ಮಾಡಲಾಗಿದ್ದು, ಉಳಿದವರು ದಾಳಿ ವೇಳೆ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ 5 ಕೋಳಿಗಳನ್ನು ಮತ್ತು ಕೋಳಿಗಳ ಕಾಲಿಗೆ ಕಟ್ಟುವ ೨ ಬಾಲುಗಳು ಹಾಗೂ 970 ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *