ಉಡುಪಿ: ಕಳೆದ 15 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ, ಸುಮಾರು 10ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ ಬೇಕಾಗಿದ್ದ ಎಲ್ ಪಿಸಿ ಹಾಗೂ ವಾರೆಂಟ್ ಆರೋಪಿಯನ್ನು ಉಡುಪಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರ ತಾಲೂಕಿನ ಕುಂಭಾಶಿ ನಿವಾಸಿ ವಿಘ್ನೇಶ್ವರ ಐತಾಳ್ (56) ಎಂದು ಗುರುತಿಸಲಾಗಿದೆ. ವಿಘ್ನೇಶ್ವರ ಐತಾಳ್ ವಿರುದ್ಧ 2011ರಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಸೇರಿ 10 ವಿವಿಧ ಪ್ರಕರಣಗಳು ದಾಖಲಾಗಿತ್ತು, ಆದರೆ ಪ್ರಕರಣ ದಾಖಲಾದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ಕಳೆದ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದು. ಆರೋಪಿಯ ವಿರುದ್ಧ 10ಕ್ಕೂ ಹೆಚ್ಚು ಬಾರಿ ವಾರೆಂಟ್ ಹೊರಡಿಸಲಾಗಿತ್ತು. ಅಲ್ಲದೆ ನ್ಯಾಯಾಲಯ ಆತನನ್ನು ‘ತಲೆಮರೆಸಿಕೊಂಡ ಆರೋಪಿ’ ಎಂದು ಘೋಷಿಸಿತ್ತು. ಅದರಂತೆ ಉಡುಪಿ ನಗರ ಠಾಣಾ ಪ್ರಭಾರ ನಿರೀಕ್ಷಕರಾದ ಮಹೇಶ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ, ಪಿಎಸ್ ಐ ಭರತೇಶ ಕಂಕಣವಾಡಿ ಹಾಗೂ ಸಿಬ್ಬಂದಿಗಳಾದ ಪ್ರಸನ್ನ.ಸಿ, ರಮೇಶ ಮತ್ತು ಆನಂದ ಅವರನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ. ಬೆಂಗಳೂರಿನ ತಲಘಟ್ಟಪುರದ ಆರ್ ಕೆ ಮಠ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿದ್ದ ಆರೋಪಿಯನ್ನು ಮಾರ್ಚ್ 5 ರಂದು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದು, ಮಾರ್ಚ್ 6 ರಂದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

