Breaking News

ಹೊಸಕೋಟೆ | 5.5 ಕೆಜಿ ಗಾಂಜಾ, ಎಂಡಿಎಂಎ ವಶ: 8 ಮಂದಿ ಸೆರೆ

ಹೊಸಕೋಟೆ: ಉಪವಿಭಾಗ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆ ಮತ್ತು ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಒಟ್ಟು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಡಿವೈಎಸ್‌ಪಿ ಮಲ್ಲೇಶ್ ಅವರ ನೇತೃತ್ವದಲ್ಲಿ ಟಿಎಸ್‌ಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ಸುಂದರ್ ಹಾಗೂ ನಂದಗುಡಿ ಠಾಣೆ ಇನ್‌ಸ್ಪೆಕ್ಟರ್ ಶಾಂತರಾಮ ಅವರ ನೇತೃತ್ವದ ತಂಡಗಳು ಕಾರ್ಯಾಚರಣೆ ನಡೆಸಿ ಬಂಧಿತರಿಂದ ಒಟ್ಟು 5.5 ಕೆ.ಜಿ ಗಾಂಜಾ, ಎಂಡಿಎಮ್‌ಎ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತಿರುಮಲಶೆಟ್ಟಿಹಳ್ಳಿ ಮತ್ತು ನಂದಗುಡಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *