Breaking News

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಬಳ್ಳಾರಿ : ವೇಗವಾಗಿ ಚಲಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಲ್ಲಿನ ಅಲ್ಲಂ ಸುಮಂಗಳಮ್ಮ ಕಾಲೇಜು ಬಳಿ ನಡೆದಿದೆ. ಆಂಧ್ರದ ಕರ್ನೂಲ್‌ನಿಂದ ಆಗಮಿಸಿದ್ದ ಕಾರು, ದುರ್ಗಮ್ಮ ಗುಡಿ ವೃತ್ತದಿಂದ ಸಂಚರಿಸುವ ವೇಳೆ ಅಲ್ಲಂ ಸುಮಂಗಳಮ್ಮ ಕಾಲೇಜು ಬಳಿ ರಸ್ತೆಯ ಹಂಪ್ಸ್ ಗಮನಿಸದ ಪರಿಣಾಮ ಕಾರು ಪಲ್ಟಿಯಾಗಿ ರಸ್ತೆಬದಿಯ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಚಾಲಕ ಸೇರಿದಂತೆ ಓರ್ವ ಸವಾರ ಸ್ಥಳದಿಂದ ಪರಾರಿಯಾಗಿದ್ದಾರೆ. ಮತ್ತೊಬ್ಬ ಲೋಕೇಶ್ ಎಂಬ ಸವಾರ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆಕ್ರೋಶಗೊಂಡ ಸ್ಥಳೀಯರು ಆತನಿಗೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *