Breaking News

ದಕ್ಷಿಣಕನ್ನಡದಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಪೋಟ : ಓರ್ವ ಅರೆಸ್ಟ್!

ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಸಮೀಪದ ನೂಜಿಯಲ್ಲಿ ಶುಕ್ರವಾರ ಸಂಜೆ ದೊಡ್ಡ ಸದ್ದಿನೊಂದಿಗೆ ಸ್ಫೋಟ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸುಡುಮದ್ದು ತಯಾರಿಕಾ ಘಟಕದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸರ್ಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿಯಾದ ಆರೋಪಿ ಅಬ್ದುಲ್ ಗಫೂರ್ ಎಂಬಾತ ಅಕ್ರಮವಾಗಿ ಶೆಡ್ ನಿರ್ಮಿಸಿ, ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ, ಅಕ್ರಮವಾಗಿ ಸಂಗ್ರಹಿಸಿದ್ದ. ಈ ಸುಡುಮದ್ದುಗಳು ಸ್ಪೋಟಗೊಂಡಿದೆ. ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಮರಗಳು ಸುಟ್ಟು ಹೋಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿತ ಅಬ್ದುಲ್ ಗಫೂರ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *