ಸಿಂಧನೂರು: ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಸುಖಾಲಪೇಟೆಯಲ್ಲಿ ಯೂಸುಫ್ ಅಂಬರ್ ಖಾನ್ ಅವರಿಗೆ ಸೇರಿದ ಗೋದಾಮಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಗೋದಾಮಿನ ಹಿಂಭಾಗದ ಕಸಕ್ಕೆ ಹಚ್ಚಿದ್ದ ಬೆಂಕಿಯ ಕಿಡಿ ತಗುಲಿದ್ದರಿಂದ ಆರ್‌ಎನ್‌ಆರ್ ಭತ್ತದ 750 ಚೀಲಗಳು ಮತ್ತು ಗೊಬ್ಬರದ ಚೀಲಗಳು ಸುಟ್ಟುಹೋಗಿದ್ದು, ಸುಮಾರು ₹20 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಮಾಲೀಕ ತಿಳಿಸಿದ್ದಾರೆ. ಗೋದಾಮಿನ ಹಿಂಭಾಗದ ಖಾಲಿ ಜಾಗದಲ್ಲಿ ಕಸಕ್ಕೆ ಬೆಂಕಿ ಹಚ್ಚಲಾಗಿತ್ತು. ಗೋದಾಮಿನಲ್ಲಿದ್ದ ಆರ್‌ಎನ್‌ಆರ್ ಭತ್ತದ ಸುಮಾರು 750 ಚೀಲಗಳು, 50ಕ್ಕೂ ಹೆಚ್ಚು ಗೊಬ್ಬರದ ಚೀಲಗಳು ಸುಟ್ಟು ಭಸ್ಮವಾಗಿವೆ. ಬೆಂಕಿ ಅವಘಡದಿಂದ 20 ಲಕ್ಷ ರೂ.ಗೂ ಅಧಿಕ ನಷ್ಟವಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇತ್ತೀಚೆಗೆ ರಾಯಚೂರಿನಲ್ಲಿ ಇಂತಹ ಅಗ್ನಿ ಅವಘಡಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗಷ್ಟೇ ಸಿಂಧನೂರಿನಲ್ಲಿ ಕುರಿ ಶೆಡ್‌ಗೆ ಬೆಂಕಿ ಬಿದ್ದು 700ಕ್ಕೂ ಹೆಚ್ಚು ಕುರಿಗಳು ಅಸುನೀಗಿದ್ದವು.
bigtvnews | Hubli Dharwad News | Kannada News | Karnataka News Hubli News | News In Hubli | Local news

