Breaking News

ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದಾತನ ಬಂಧನ

ಮಂಗಳೂರು: ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು ನಿವಾಸಿ ರೋಶನ್ ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಗಸ್ತಿನಲ್ಲಿದ್ದಾಗ ಮಾ.5ರಂದು ರಾತ್ರಿ 7 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಸಿಗರೇಟು ಸೇದುತ್ತಿದ್ದ ಯುವಕನನ್ನು ವಿಚಾರಿಸಿದ್ದು, ಆತನ ವರ್ತನೆ ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಮತ್ತಷ್ಟು ವಿಚಾರಿಸಿದಾಗ ಸಿಗರೇಟಿನ ಒಳಗಡೆ ಮಾದಕ ದ್ರವ್ಯ ತುಂಬಿಸಿ ಸೇದಿರುವುದನ್ನು ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಆತನ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *