Breaking News

ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ನಿತಿನ್(26) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಹೇಳಲಾಗಿದೆ. ದಿನಸಿ ವರ್ತಕ ಬೆಲ್ಲದ ಕೃಷ್ಣಪ್ಪ ಅವರ ಮೊಮ್ಮಗ ಹಾಗೂ ನಾಗರಾಜ್ ಅವರ ಪುತ್ರ ನಿತಿನ್ ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಮೈಸೂರಿನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *