Breaking News

ಎಪಿಕೆ ಫೈಲ್ ಡೌನ್‌ಲೋಡ್ ಮಾಡಿಸಿ ಮೋಸ

ಹುಬ್ಬಳ್ಳಿ: ಫೇಸ್‌ಬುಕ್‌ನಲ್ಲಿ ಬಂದ ಯುಸಿಒ ಪೆನ್ಷನ್ ಕಾರ್ಡ್ ಜಾಹೀರಾತುಳ್ಳ ಎಪಿಕೆ ಫೈಲ್ ಡೌನ್ ಲೋಡ್ ಮಾಡಿದ ನಗರದ ವ್ಯಕ್ತಿಯೊಬ್ಬರು ವಂಚಕರ ಬಲೆಗೆ ಬಿದ್ದು, 5.99 ಲಕ್ಷ ರೂ. ಕಳೆದುಕೊಂಡಿದ್ದಾರೆ. ಅರುಣ ಕೆ. ವಂಚನೆಗೆ ಒಳಗಾದವರು. ಫೇಸ್‌ಬುಕ್ ನೋಡುವಾಗ ಯುಸಿಒ ಪೆನ್ಷನ್ ಕಾರ್ಡ್ ಬಗ್ಗೆ ಮಾಹಿತಿ ಬಂದಿದೆ. ಯುಸಿಒ ಬ್ಯಾಂಕ್ ನಿವೃತ್ತ ಅಧಿಕಾರಿಯಾಗಿದ್ದ ಅರುಣ ಅದರ ಮೇಲೆ ಕ್ಲಿಕ್ ಮಾಡಿದ್ದಾರೆ. ನಂತರ ಅಮಿತಕುಮಾರ ಎಂಬಾತ ವಾಟ್ಸ್‌ಆಯಪ್ ಮೂಲಕ ಸಂಪರ್ಕಿಸಿ, ಎಪಿಕೆ ಫೈಲ್ ಡೌನ್‌ಲೋಡ್‌ಮಾಡಿಸಿ 5.99 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *