Breaking News

ಮಹಿಳೆ ಜತೆ ಅಸಭ್ಯ ವರ್ತನೆ: ಬಂಧನ

ಜೇವರ್ಗಿ: ಮಹಿಳೆಯೊಬ್ಬರ ಮೇಲೆ ಅಸಭ್ಯವಾಗಿ ವರ್ತಿಸಿದ ಘಟನೆಗೆ ಸಂಬಂಧಿಸಿದಂತೆ ಶನಿವಾರ ಆರೋಪಿಯನ್ನು ಬಂಧಿಸಿ‌ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ತಾಲ್ಲೂಕಿನ ಆಂದೋಲಾ ಗ್ರಾಮದ ಮಶಾಕ್ ಹುಸೇನ್ (65) ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಆಂದೋಲಾ ಗ್ರಾಮದ ಹೊರವಲಯದ ಹೊಲವೊಂದರಲ್ಲಿ ಮಹಿಳೆ ಜತೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತನೆ ಮಾಡುತ್ತಿರುವ ವಿಡಿಯೊ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಜೇವರ್ಗಿ ಸಿಡಿಪಿಒ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ ಎಂದು ಜೇವರ್ಗಿ ಪಿಎಸ್‌ಐ ಗಜಾನನ ಬಿರಾದಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *