Breaking News

ಶೂ ಹಾಕದೆ ಬಂದ ವಿದ್ಯಾರ್ಥಿಗಳಿಗೆ ಚಪ್ಪಲಿ ಹಾರ: ಆಂಧ್ರದ ಖಾಸಗಿ ಶಾಲೆ ವಿರುದ್ಧ ಆಕ್ರೋಶ

ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಉಯ್ಯೂರು ಪಟ್ಟಣದಲ್ಲಿ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಅಮಾನವೀಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಶೂ ಧರಿಸಿ ಬಾರದ ಕಾರಣಕ್ಕೆ 10ನೇ ತರಗತಿಯ ವಿದ್ಯಾರ್ಥಿಗಳ ಕುತ್ತಿಗೆಗೆ ಚಪ್ಪಲಿಯ ಹಾರ ಹಾಕಿ ಅವಮಾನಿಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಘಟನೆ ವಿಜಯಸಾಯಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಮಾರ್ಚ್ 6ರಂದು ನಡೆದಿದ್ದು, ಆ ದಿನ 10ನೇ ತರಗತಿಯ ಸುಮಾರು 15 ವಿದ್ಯಾರ್ಥಿಗಳು ಶೂ ಧರಿಸದೆ ಶಾಲೆಗೆ ಬಂದಿದ್ದರು. ಇದರಿಂದ ಕೋಪಗೊಂಡ ಪ್ರಾಂಶುಪಾಲರು ಮಕ್ಕಳ ಕಾಲಿನಲ್ಲಿದ್ದ ಚಪ್ಪಲಿಗಳನ್ನು ತೆಗೆದು ಅವರ ಕುತ್ತಿಗೆಗೆ ಹಾರದಂತೆ ಹಾಕಿ ಶಿಕ್ಷೆ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಕ್ಕಳು ಮನೆಗೆ ತೆರಳಿ ಪೋಷಕರಿಗೆ ತಿಳಿಸಿದ ಬಳಿಕ, ಮುಂದಿನ ದಿನ ಪೋಷಕರು ಶಾಲೆಗೆ ಬಂದು ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರನ್ನು ಪ್ರಶ್ನಿಸಿದ್ದಾರೆ. ಆದರೆ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಗೆ ದೂರು ನೀಡಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *