ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ಪೂರು ಬಳಿ ಭಾನುವಾರ ಕಾರನ್ನು ಅಡ್ಡಗಟ್ಟಿ ಯುವಕನೊಬ್ಬನನ್ನು ಅಪಹರಣ ಮಾಡಲಾಗಿದೆ. ಹೊನ್ನಕಳಶಾಪುರ ಗೋಪಾಲ್ ಅಪಹರಣ ಆದವರು. ಗೋಪಾಲ್ ಮತ್ತು ಅವರ ಸ್ನೇಹಿತ ಸತೀಶ್ ಅತ್ತಿಬೆಲೆಯಿಂದ ಆನೇಕಲ್‌ನತ್ತ ಬರುವಾಗ ಕರ್ಪೂರ ಬಳಿ ಕಾರಿಗೆ ದುಷ್ಕರ್ಮಿಗಳು ತಮ್ಮ ವಾಹನದಿಂದ ಡಿಕ್ಕಿ ಹೊಡೆದು ಗೋಪಾಲ್ ಮುಖಕ್ಕೆ ಸ್ಪ್ರೇ ಹಾಕಿ ಅಪಹರಣ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗೋಪಾಲ್ ರಿಯಲ್ ಎಸ್ಟೇಟ್ ಮತ್ತು ಹಣಕಾಸು ವ್ಯವಹಾರ ಮಾಡುತ್ತಿದ್ದ ಎನ್ನಲಾಗಿದ್ದು, ಅಪಹರಣಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆಯ ಹಿನ್ನೆಲೆಯಲ್ಲಿ ಕರ್ಪೂರ ಬಳಿ ಇದ್ದ ಟಾಟಾ ಏಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

