ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಲಯ ಅರಣ್ಯಾಧಿಕಾರಿ ದಾಳೇಶ್ ಎ.ಎಲ್. ಅವರ ಮನೆಯ ಮೇಲೆ ಶನಿವಾರ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ₹3.08 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಸಂಬಂಧ ಬಂದಿದ್ದ ದೂರಿನ ಆಧಾರದಲ್ಲಿ ಬೆಂಗಳೂರು ನಗರ-1 ವಿಭಾಗದ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಳೇಶ್ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅದರಂತೆ ಲೋಕಾಯುಕ್ತ ಪೊಲೀಸರು ಮತ್ತು ಅಧಿಕಾರಿಗಳು, ದಾಳೇಶ್ ಮತ್ತು ಅವರ ಆಪ್ತರಿಗೆ ಸೇರಿದ ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ದಾಳೇಶ್ ಮತ್ತು ಅವರ ಆಪ್ತರ ಹೆಸರಿನಲ್ಲಿ ₹2.70 ಕೋಟಿ ಮೌಲ್ಯದ 3 ನಿವೇಶನ, 2 ವಾಸದ ಮನೆ, 1 ವಾಣಿಜ್ಯ ಸಂಕೀರ್ಣ ಮತ್ತು 17 ಎಕರೆ 20 ಗುಂಟೆ ಕೃಷಿ ಜಮೀನು ಇರುವುದು ಪತ್ತೆಯಾಗಿದೆ. ₹13 ಲಕ್ಷ ಮೌಲ್ಯದ ಚಿನ್ನಾಭರಣ, ₹34.50 ಲಕ್ಷ ಮೌಲ್ಯದ ವಾಹನಗಳು ಪತ್ತೆಯಾಗಿವೆ. ಶೋಧ ಕಾರ್ಯ ಮುಂದುವರೆದಿದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

