ಶಿವಮೊಗ್ಗ: ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿ ವ್ಯಕ್ತಿಯೊಬ್ಬರ ಖಾಸಗಿ ವಿಡಿಯೊವನ್ನು ಹರಿಬಿಟ್ಟಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಕ್ರೈಂ ಪೊಲೀಸರು ಬಂದಿಸಿದ್ದಾರೆ. ಕಳೆದ ಫೆ.6ರಂದು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರು ತನ್ನ ಖಾಸಗಿ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಅಪಲೋಡ್ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದರು. ತಾಂತ್ರಿಕ ದಾಖಲೆಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಹೊಸನಗರ ನಿವಾಸಿ ಸೀಮಾ ಜೂಲಿಯನ್ ಸೆರಾವೂ ಹಾಗೂ ಬೆಂಗಳೂರಿನ ನಿವಾಸಿ ನಿಶಾಂತ್ ಎಂಬುವವರನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

