Breaking News

ಆಕಸ್ಮಿಕ ಅಗ್ನಿ ದುರಂತ : ಒಮಿನಿ ಕಾರು ಭಸ್ಮ

ರಿಪ್ಪನ್ ಪೇಟೆ: ಬೆಳ್ಳೂರು ಗ್ರಾಮದ ಬಂಗ್ಲೆ ದಿಂಬದ ಬಳಿ ಶನಿವಾರ ತಡರಾತ್ರಿ ಚಲಿಸುತ್ತಿದ್ದ ಓಮಿನಿಯಲ್ಲಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ. ಶಿವಮೊಗ್ಗದಿಂದ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಚಾಲಕ ಶ್ರೀಕಾಂತ್ ಹಾಗೂ ಮಾಲಿಕ ಗಂಗಾಧರ್ ಇಬ್ಬರು ವಾಹನದಿಂದ ಇಳಿದು ಅಪಾಯದಿಂದ ಪಾರಾಗಿದ್ದಾರೆ. ಗಂಗಾಧರ್ ಅವರ ಮನೆಯಲ್ಲಿ ಮಾರ್ಚ್ 12ರಂದು ನಡೆಯಲಿದ್ದ ಶುಭ ಕಾರ್ಯಕ್ಕೆ ಶಿವಮೊಗ್ಗದಿಂದ ದಿನಸಿ ಸಾಮಗ್ರಿ ಹಾಗೂ ತರಕಾರಿಗಳನ್ನು ತುಂಬಿಕೊಂಡು ಬಂದಿದ್ದರು. ನಂತರ ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಲಾಯಿತು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *