Breaking News

ಮನೆಗೆ ನುಗ್ಗಿ 5.35 ಲಕ್ಷ ರೂ. ಮೌಲ್ಯದ ನಗನಗದು ಕಳವು: ಪ್ರಕರಣ ದಾಖಲು

ಕೋಟ: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಮಾ.8ರಂದು ರಾತ್ರಿ ವೇಳೆ ಬೇಳೂರು ಗ್ರಾಮದ ಗುಳ್ಳಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸತೀಶ ಶೆಟ್ಟಿ ಎಂಬವರು ರಾವುತೇಶ್ವರ ದೇವಸ್ಥಾನದ ಗೆಂಡೋತ್ಸವ ಕಾರ್ಯಕ್ರಮಕ್ಕೆ ಹೆಂಡತಿ ಹಾಗೂ ಮಗಳೊಂದಿಗೆ ಮನೆಗೆ ಬೀಗ ಹಾಕಿ ಹೋಗಿದ್ದು ಪೂಜೆ ಮುಗಿಸಿ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಮುಖ್ಯ ದ್ವಾರದ ಬೀಗವನ್ನು ಕತ್ತಿಯಿಂದ ಮುರಿದು, ಒಳನುಗ್ಗಿದ ಕಳ್ಳರು, ಕೋಣೆಯ ಕಾಪಾಟಿಲ್ಲಿದ್ದ 2,35,000 ರೂ. ನಗದು ಮತ್ತು ಚಿನ್ನದ ಬ್ರಾಸ್ ಲೈಟ್ ಹಾಗೂ ಕಿವಿಯ ಬೆಂಡೋಲೆಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಇವುಗಳ ಒಟ್ಟು ಮೌಲ್ಯ 5,35,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *